ಸಾವು ಸಂಭ್ರಮವಾದಾಗ!.?
ಧರ್ಮಗಳ ನಡುವಿನ ಅಸಹನೆ, ಕೋಮುವಾದ ಹುಟ್ಟು ಹಾಕಿದ ಭಯೋತ್ಪಾದಕತೆ, ಮಾನವೀಯ ಮೌಲ್ಯಗಳನ್ನೆಲ್ಲ ಗುಡಿಸಿ ಗುಂಡಿಗೆ ಹಾಕಿರುವ ಜಾಗತೀಕರಣದೀ ಸಮಯದಲ್ಲಿ ವ್ಯಕ್ತಿಯೊಬ್ಬನ ಸಾವಿಗೆ ಮಿಡಿಯಬಲ್ಲ ಅಂತ:ಕರಣ ಮನುಷ್ಯನಲ್ಲಿನ್ನೂ ಉಳಿದಿರಬಹುದೆಂಬ ನನ್ನ ನಂಬಿಕೆ ಹುಸಿಯಾಗತೊಡಗಿದೆ. ಅದಕ್ಕೆ ಕಾರಣ ಮೊನ್ನಿನ ಕೆಲವು ಘಟನೆಗಳು: ಜಾಗತಿಕ ಭಯೋತ್ಪಾದಕ ಒಸಾಮ ಬಿನ್ ಲಾಡೆನ್ ಅಮೇರಿಕಾ ಸೇನೆಯಿಂದ ಹತನಾದ ನಂತರ ಆದೇಶದ ಜನತೆ ತಡರಾತ್ರಿಯ ವರೆಗು ಕುಡಿದು-ಕುಪ್ಪಳಿಸಿ ವಿಶ್ವವನ್ನೇ ಗೆದ್ದಂತೆ ವಿಜಯೋತ್ಸವ…